ಭಟ್ಕಳ: ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡಿಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ.
ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಗಳು ದಾಖಲು ಮಾಡಲಾಗಿದೆ. ಬಸ್ ಮತ್ತು ಟೆಂಪೋ ನಲ್ಲಿ 75ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಎಡಬಾಗಕ್ಕೆ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ.
ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಹೆಚ್ಚಿನವರು ಶಿಕ್ಷಕರು ಆಗಿದ್ದು ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮತ್ತಿತರ ಪದಾಧಿಕಾರಿಗಳಿಂದ ಗಾಯಾಳು ಶಿಕ್ಷಕರ ಚಿಕಿತ್ಸೆಗೆ ನೆರವು ನೀಡಿದರು.