ಭಟ್ಕಳ: ವಿದ್ಯಾರ್ಥಿನಿಯೋರ್ವಳು ಮನೆಯ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಉತ್ತರಕೊಪ್ಪದ ಶೇಡಗೇರಿ ಗೋಳಿಕುಂಬ್ರಿಯಲ್ಲಿ ನಡೆದಿದೆ.
ದೀಪಿಕಾ ಗೋವಿಂದ ನಾಯ್ಕ (17) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಮುರ್ಡೇಶ್ವರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಆತ್ಮಹತ್ಯೆಗೆ ನೈಜ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.