ಉಡುಪಿ, ಜ.೨೩: ನ್ಯಾಯಾಲಯಗಳಿಗಿಂತ ಮಧ್ಯಸ್ಥಿಕೆ ಕೇಂದ್ರದ ಮೂಲಕ ಜನತೆಗೆ ಪರಿಣಾಮಕಾರಿ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ರಾಜ್ಯಪಾಲ ನ್ಯಾ.ಎಸ್.ಅಬ್ದುಲ್ ನಝೀರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ ಹಾಗೂ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ಆಯೋಜಿಸಲಾದ ವಕೀಲರಿಗೆ ಮಧ್ಯಸ್ಥಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಕ್ಷಿದಾರರು ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಾಗದ ಕೆಲವೊಂದು ವಿಚಾರಗಳನ್ನು ಮಧ್ಯಸ್ಥಿಕೆ ಕೇಂದ್ರದಲ್ಲಿ ನ್ಯಾಯಾಧೀಶರ ಮುಂದೆ ತೊಡಿಕೊಳ್ಳಲು ಅವಕಾಶ ಇರುವುದರಿಂದ ಇಲ್ಲಿ ಸರಿಯಾದ ನ್ಯಾಯವನ್ನು ನಿರೀಕ್ಷಿಸಬಹುದಾಗಿದೆ. ಇದರಲ್ಲಿ ಕಕ್ಷಿದಾರ ಹಾಗೂ ನ್ಯಾಯವಾದಿಗಳ ಪಾತ್ರ ಅತಿ ಮುಖ್ಯವಾದುದು ಎಂದರು.
ದೇಶದಲ್ಲಿ ಎಲ್ಲ ನ್ಯಾಯಾಲಯಗಳಲ್ಲಿ ಒಟ್ಟು ೨.೯೨ಕೋಟಿ ಪ್ರಕರಣಗಳು ಇತ್ಯರ್ಥಗೊಳ್ಳದೆ ಬಾಕಿ ಉಳಿದಿವೆ. ಮಧ್ಯಸ್ಥಿಕೆ ಕೇಂದ್ರದ ಮೂಲಕ ಈವರೆಗೆ ಒಟ್ಟು ೬೨೦೧ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಇನ್ನು ಶೇ.೩೯ರಷ್ಟು ಪ್ರಕರಣಗಳು ಬಾಕಿ ಇವೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಮಧ್ಯಸ್ಥಿಕೆ ಕೇಂದ್ರ ಈಗ ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದೆ ಇದನ್ನು ಪ್ರತಿ ತಾಲೂಕಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಮಧ್ಯಸ್ಥಿಕೆಯ ಕುರಿತು ವಕೀಲರಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಬಿ.ಚೆಂಗಪ್ಪ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಕೀಲರ ಸಂಘದ ಅಧ್ಯಕ್ಷ ವಿಜಯ ಹೆಗ್ಡೆ ಉಪಸ್ಥಿತರಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರಣ್ ಕುಮಾರ್ ವಂದಿಸಿದರು. ವಿಜಯ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ ದ.ಕ., ಕೊಡಗು, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ವಕೀಲರು ಪಾಲ್ಗೊಂಡಿದ್ದರು.