ಬಂಟ್ವಾಳ, ಫೆಬ್ರವರಿ 1:ಪುದು ಗ್ರಾಮದ ಅಮ್ಮೆಮ್ಮಾರ್ ಬದ್ರಿಯಾ ಮದರಸ ಮತ್ತು ಜುಮ್ಮಾ ಮಸೀದಿ ಅಧ್ಯಕ್ಷರಾದ ಎ.ಎ. ಅಬ್ದುಲ್ ಖಾದರ್ (85) ಅವರು ಭಾನುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ 40 ವರ್ಷಗಳ ಕಾಲ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿದ್ದ ಅವರು ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಖಾದರ್ರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಓರ್ವ ಹೆಣ್ಣು, ನಾಲ್ವರು ಗಂಡು ಮಕ್ಕಳ ಜೊತೆ ಅಪಾರ ಬಂಧು ವರ್ಗಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬದ್ರಿಯಾ ಆಡಳಿತ ಸಮಿತಿ ತೀವ್ರ ಸಂತಾಪ ಸೂಚಿಸಿದೆ.