ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ ನೂತನವಾಗಿ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೆಂಕಟೇಶ ನಾಯ್ಕ ನೇಮಕ

ಭಟ್ಕಳ ನೂತನವಾಗಿ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೆಂಕಟೇಶ ನಾಯ್ಕ ನೇಮಕ

Sun, 27 Nov 2022 07:24:07  Office Staff   so news

ಭಟ್ಕಳ: ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಭಟ್ಕಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಿರಾಲಿ ವೆಂಕಟೇಶ ನಾರಾಯಣ ನಾಯ್ಕ ಹೆಸರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಭಟ್ಕಳ ತಾಲೂಕಿನ ಶಿರಾಲಿಯ ವೆಂಕಟೇಶ ನಾರಾಯಣ ನಾಯ್ಕ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೂಡಲೇ ಪ್ರಮಾಣ ವಚನ ಸ್ವೀಕರಿಸಿ ಕ್ಷೇತ್ರದಲ್ಲಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ಬಲಪಡಿಸುವ ಮತ್ತು ಸ್ಥಿರಗೊಳಿಸುವತ್ತ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.


Share: