ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ:ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆಸ್ಪತ್ರೆಯಿಂದ ಪರಾರಿಯಾದ ಜಾಲಿ ಪಟ್ಟಣ ಪಂ.ಸದಸ್ಯ

ಭಟ್ಕಳ:ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆಸ್ಪತ್ರೆಯಿಂದ ಪರಾರಿಯಾದ ಜಾಲಿ ಪಟ್ಟಣ ಪಂ.ಸದಸ್ಯ

Wed, 22 Jun 2022 06:01:35  Office Staff   SO NEWS

ಭಟ್ಕಳ: ವ್ಯಕ್ತಿಯೊಬ್ಬರಿಗೆ ರಾಡ್ ನಿಂದ ಹಲ್ಲೆ ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಜಾಲಿ ಪಟ್ಟಣ ಪಂಚಾಯತ ಸದಸ್ಯ ರಮೇಶ್ ನಾಯ್ ಎಂಬಾತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ನಡೆದಿದೆ.

ರಮೇಶ್ ನಾಯ್ ಸಹೋದರನೊಂದಿಗೆ ಸೇರಿಕೊಂಡು ವ್ಯಕ್ತಿಯೊಬ್ಬರಿಗೆ ರಾಡ್ ನಿಂದ ಹಲ್ಲೆ ನಡೆಸಿದ್ದನು. ಬಳಿಕ ಅನಾರೋಗ್ಯದ ನೆಪವೊಡ್ಡಿ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿದ್ದನು. ಭಟ್ಕಳ ಪೊಲೀಸರು ಆರೋಪಿಯ ಸುಳಿವು ಪತ್ತೆಹಚ್ಚಿ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಬಂದಿದ್ದು, ಈ ವೇಳೆ ರಮೇಶ್ ನಾಯ್ಡ್ ಪೊಲೀಸರ ಕಣ್ಣು ತಪ್ಪಿಸಿಕೊಂಡು ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ತಿಳಿದುಬಂದಿದೆ.


Share: