ಭಟ್ಕಳ:ಚೆನ್ನೈ ಕಲೆದಾ- ನೆಕ್ಟ್ ಟಾರ್ಗೆಟ್ ಡಿಸೆಂಬರ್ 25 ಆ್ಯಂಡ್ ಹ್ಯಾಪಿ Jes ನ್ಯೂ ಇಯರ್ 2023' ಎಂದು ಇಂಗ್ಲೀಷ್‌ನಲ್ಲಿ ಬರೆದ ಪೋಸ್ಟ್ ಕಾರ್ಡ್ ಡಿಸೆಂಬರ್‌ನಲ್ಲಿ ಭಟ್ಕಳ ಪೊಲೀಸ್ ಠಾಣೆಗೆ ತಲುಪಿತ್ತು. ಸೂಕ್ಷ್ಮ ವಿಷಯವಾಗಿದ್ದರಿಂದ ವಿಚಾರವನ್ನ ಬಹಿರಂಗಪಡಿಸದೇ ಪೊಲೀಸರು ತನಿಖೆ ನಡೆಸಿದ್ದರು.
ಪೋಸ್ಟ್ ಕಾರ್ಡ್ ಮಂಗಳೂರಿನ ಸುಬ್ರಹ್ಮಣ್ಯದಿಂದ ಪೋಸ್ಟ್ ಆಗಿದೆ ಎನ್ನಲಾಗಿದ್ದು, ಭಯೋತ್ಪಾದಕ ಚಟುವಟಿಕೆಗೂ ಇದಕ್ಕೂ ಯಾವುದೇ ಲಿಂಕ್ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದೇ ರೀತಿ ಪೋಸ್ಟ್ ಕಾರ್ಡ್ ಬೆದರಿಕೆಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಹೊಸಪೇಟೆ ಮೂಲದ ಹನುಮಂತಪ್ಪ ಎಂಬುವವನನ್ನು ಬಂಧಿಸಿದ್ದಾರೆ.
ಸದ್ಯ ಈತ ಭಟ್ಕಳ ಪೊಲೀಸರಿಗೆ ಬಾಂಬ್ ಬೆದರಿಕೆ ಪತ್ರ ಬರೆದ ಕುರಿತು ಭಟ್ಕಳ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈತನಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈವರೆಗೂ ಭಟ್ಕಳಕ್ಕೆ ಬಾರದೇ ಇಲ್ಲಿಯ ಬಗ್ಗೆ ಮಾಹಿತಿ ಸಹ ಇರದ ಈತ ಪತ್ರ ಬರೆದಿದ್ದು ಯಾಕೆ? ಈತನಿಗೂ ಉಗ್ರವಾದಿಗಳಿಗೂ ಏನಾದ್ರು ಲಿಂಕ್ ಇದೆಯಾ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು,ಹೆಚ್ಚಿನ ತನಿಖೆಗಾಗಿ ಭಟ್ಕಳ ಪೊಲೀಸರು ತಮಿಳುನಾಡಿಗೆ ತೆರಳಿದ್ದು ಈತನನ್ನು ತಮ್ಮ ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ASP ಸಿ.ಟಿ ಜಯಕುಮಾರ್ ತಿಳಿಸಿದ್ದಾರೆ.