ಭಟ್ಕಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಸಂಕಲ್ಪದೊAದಿಗೆ ಆರಂಭಗೊAಡಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಸೋಮವಾರ ಭಟ್ಕಳಕ್ಕೆ ಆಗಮಿಸಿದ್ದು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು.
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪುಜಾರಿ ನೇತೃತ್ವದಲ್ಲಿ ವಿಜಯ ಸಂಕಲ್ಪ ರಥವನ್ನು ಏರಿದ ಶಾಸಕ ಸುನಿಲ್ ನಾಯ್ಕ ನೂರಾರು ಕಾರ್ಯಕರ್ತರೊಂದಿಗೆ ಮೂಡಭಟ್ಕಳ ಬೈಪಾಸ್ ನಿಂದ ಡಾ.ಚಿತ್ತರಂಜನ್ ಸರ್ಕಲ್ ಮೂಲಕ ಶಮ್ಸುದ್ದೀನ್ ವೃತ್ತ ಕ್ಕೆ ತಲುಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮುಖಂಡರು ಮಾತನಾಡಿದರು.
ನಳೀನ್ ಕುಮಾರ್ ಕಟೀಲ್ ಮಾತನಾಡಿ, ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನೇಕ ಜನಪರ ಕಾರ್ಯಗಳನ್ನು ನೀಡಿದ್ದು ಇದುವೇ ಬಿಜೆಪಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಚನ್ನಪಟ್ಟಣ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ವಿಜಯ ಸಂಕಲ್ಪ ರಥಕ್ಕೆ ಚಾಲನೆ ನೀಡಲಾಯಿತು.
ಬಿಜೆಪಿ ಉ.ಕ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತರಾಮ್, ಭಟ್ಕಳ ಮಂಡಲಾಧ್ಯಕ್ಷ ಸುಬ್ರಾಯ ದೇವಾಡಿಗ, ಪಶ್ಚಿಮ ಘಟ್ಟ ಕಾರ್ಯ ಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.