ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಭಟ್ಕಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Tue, 11 Oct 2022 06:13:16  Office Staff   so news

ಭಟ್ಕಳ: ತಾಲೂಕು ಆಡಳಿತ, ತಾಲೂಕು ಪಂಚಾಯತ, ಪುರಸಭೆ ಭಟ್ಕಳ, ಪಟ್ಟಣ ಪಂಚಾಯತ ಜಾಲಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೊಂಡ ಸಮುದಾಯದ ಹಿರಿಯ ಮುಖಂಡ ಸೋಮಯ್ಯ ಗೊಂಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸರಕಾರದ ನೇತೃತ್ವದಲ್ಲಿಯೇ ವಾಲ್ಮೀಕಿ ಜಯಂತಿಯನ್ನು ಆಚರಿಸುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ ಎಂದು ತಿಳಿಸಿದರು. ಕುಂದಾಪುರ ಭಂಡಾರಕ‌ ಪಿ.ಯು.ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಮ್. ಗೊಂಡ ಮಹರ್ಷಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿದರು. ಭಟ್ಕಳ ಸಹಾಯಕ ಆಯುಕ್ತ ಮಮತಾದೇವಿ,
ವಾಲ್ಮೀಕಿ ಆಚರಣೆಯ ಮಹತ್ವವನ್ನು ತಿಳಿಸಿ ಕೊಟ್ಟರು. ತಹಶೀಲ್ದಾರ ಡಾ.ಸುಮಂತ್‌ ಸ್ವಾಗತಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಭಟ್ಕಳ ಗೊಂಡ ಸಮಾಜದ ಅಧ್ಯಕ್ಷ ನಾರಾಯಣ ಗೊಂಡ ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ ಹೆಗಡೆ ವಂದಿಸಿದರು. ಶಿಕ್ಷಕ ಪರಮೇಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಆಚಾರಿ ಪ್ರಾರ್ಥನೆಯನ್ನು ಹಾಡಿದರು. ಕಳೆದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಪುರಸಭೆ, ಜಾಲಿ ಪಟ್ಟಣ ಪಂಚಾಯತ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು


Share: