ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಾರಿ ಮಳೆ ಹಿನ್ನಲೆ : ನಾಳೆ (ಜುಲೈ 1ರಂದು ) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ : ನಾಳೆ (ಜುಲೈ 1ರಂದು ) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Fri, 01 Jul 2022 04:03:17  Office Staff   SO News

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ, ಶುಕ್ರವಾರ (ಜುಲೈ 1) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆದರೆ ಜಿಲ್ಲಾಡಳಿತ ನಾಳೆ ಸಹ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳು ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Share: