ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಂಗಳೂರು: 90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ವಶ – ಮೂವರ ಬಂಧನ

ಮಂಗಳೂರು: 90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ವಶ – ಮೂವರ ಬಂಧನ

Wed, 13 Sep 2023 03:51:19  Office Staff   SO News

ಮಂಗಳೂರು: ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿದ್ದಾರೆ.

 ಉಡುಪಿ ಜಿಲ್ಲೆ ಸಾಲಿಗ್ರಾಮ ಮೂಲದ ಜಯಕರ(29), ಶಿವಮೊಗ್ಗ ಜಿಲ್ಲೆ ಸಾಗರದ ಆದಿತ್ಯ (25), ಹಾವೇರಿ ಜಿಲ್ಲೆ ಲೋಹಿತ್ ಕುಮಾರ್ ಗುರಪ್ಪನವರ್ (39) ಬಂಧಿತರೆಂದು  ಗುರುತಿಸಲಾಗಿದೆ.

ಬಂಧಿತರಿಂದ 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿದ್ದರು.


Share: