ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಂಗಳೂರು: ಲಿವರ್ ದಾನ ಮಾಡಿದ ಉಪನ್ಯಾಸಕಿ ಮೃತ್ಯು

ಮಂಗಳೂರು: ಲಿವರ್ ದಾನ ಮಾಡಿದ ಉಪನ್ಯಾಸಕಿ ಮೃತ್ಯು

Tue, 17 Sep 2024 18:59:36  Office Staff   Vb

ಮಂಗಳೂರು: ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ರವಿವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತರನ್ನು ಅರ್ಚನಾ ಕಾಮತ್ (33) ಎಂದು ಗುರುತಿಸಲಾಗಿದೆ.

ತನ್ನ ಪತಿಯ ಸಂಬಂಧಿ ಮಹಿಳೆಯು ಅನಾರೋಗ್ಯದಲ್ಲಿದ್ದು, ಅವರಿಗೆ ಲಿವರ್ ನ ಅಗತ್ಯವಿತ್ತು ಎನ್ನಲಾಗಿದೆ. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಕೂಡ ರಕ್ತದ ಗುಂಪು ಹೊಂದಾಣಿಕೆಯಾಗಿರಲಿಲ್ಲ. ಆದರೆ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅವರು ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೇ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ನಾಲ್ಕು ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಲಿವರ್ ಜೋಡಿಸಲ್ಪಟ್ಟ ಮಹಿಳೆಯು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.

ನಗರದ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಅರ್ಚನಾ ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಮೃತರು ಪತಿ, ನಾಲ್ಕು ವರ್ಷದ ಪುತ್ರನನ್ನು ಅಗಲಿದ್ದಾರೆ.


Share: