ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿರುವ ಹಲಸೂರು ಗೇಟ್ ಠಾಣಾ ಪೊಲೀಸರು, ಶೋಧ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಇಲ್ಲಿನ ಮಲ್ಲೇಶ್ವರಂನಲ್ಲಿರುವ ಚಿಲುಮೆ ಸಂಸ್ಥೆ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿ, ಶೋಧಕಾರ್ಯ ನಡೆಸಿದರು. ನಂತರ ಸಂಸ್ಥೆಯ ಸಿಬ್ಬಂದಿಯ ಹೇಳಿಕೆ | ಗಳನ್ನು ತನಿಖಾಧಿಕಾರಿಗಳು ದಾಖಲಿಸಿ ಕೊಂಡರು.
ವಶಕ್ಕೆ: ಸಂಸ್ಥೆಯ ಸಿಬ್ಬಂದಿ ಎನ್ನಲಾದ ಸುಧಾಕರ್, ರಕ್ಷಿತ್, ರೇಣುಕಾ ಪ್ರಸಾದ್ ಹಾಗೂ ಧರ್ಮೇಶ್ ರನ್ನು ವಶಕ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳ ಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಸ್ಥೆಯ ನಿರ್ದೇಶಕರಾಗಿರುವ ಕೃಷ್ಣಪ್ಪ ರವಿಕುಮಾರ್ ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಈವರೆಗೂ ಎಷ್ಟು ಮತದಾರರ ಮಾಹಿತಿ ಪಡೆದುಕೊಳ್ಳಲಾಗಿದೆ ಎಂಬುದು ಸೇರಿದಂತೆ ತನಿಖೆಗೆ ಬೇಕಾದ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಎಫ್ಐಆರ್ ದಾಖಲು:ಚಿಲುಮೆ-ಗ್ರಾಮೀಣಾಭಿವೃದ್ಧಿ ಸಂಸ್ಥೆ ಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಆ ಸಂಸ್ಥೆಯ ಕೆ.ಎಂ.ಲೋಕೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನುಮತಿಯಿಲ್ಲದೇ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮನೆಗಳಿಗೆ ತೆರಳಿ ಮತದಾರರ ಗುರುತಿನ ಚೀಟಿ,ಆಧಾರ್ ಆ್ಯಪ್ ವೊಂದಕ್ಕೆ ಮತದಾರರ ವೈಯಕ್ತಿಕ ಮಾಹಿತಿ ಅಪ್ಲೋಡ್ ಮಾಡಿದ ಆರೋಪ ಕೇಳಿಬಂದಿದೆ.