ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಸೌಹಾರ್ದ ಭೇಟಿ

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಸೌಹಾರ್ದ ಭೇಟಿ

Fri, 30 Sep 2022 04:16:25  Office Staff   SO News

ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.


Share: