ಧಾರವಾಡ,ಏ,೧೨: ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು,ಗುಲಬರ್ಗಾ ಹಾಗೂ ಬೆಳಗಾವಿಗಳಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದೆ.
ಎಸ್.ಎಸ್.ಎಲ್.ಸಿ.ಯಲ್ಲಿ ಶೇ.೪೦ರಷ್ಟು ಅಂಕಗಳನ್ನು ಪಡೆದ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಂಬಂಧಪಟ್ಟ ಸಂಸ್ಥೆ-ಇಲಾಖೆಯ ಮೇಲಾಧಿಕಾರಿಗಳ
ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಗ್ರಾಮ ಪಂಚಾಯತಿ ಮೇಲ್ವಿಚಾರಕರು ಸಂಬಂಧಪಟ್ಟ ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ಜೊತೆಗೆ ಸಂಬಂಧಿಸಿದ ದಾಖಲಾತಿಗಳನ್ನು ಲಗತ್ತಿಸಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿ.ಸಿ.ಕಾಂಪೌಂಡ್, ಧಾರವಾಡ ಇಲ್ಲಿಗೆ ಮೇ ೫ ರೊಳಗಾಗಿ ಕಳುಹಿಸಬೇಕು. ಆಯಾ ವಿಭಾಗದ ಅಭ್ಯರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಕಚೇರಿಗಳಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.