ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮುಂದಿನ 7 ತಿಂಗಳುಗಳ ಕಾಲ ಶಿರಸಿ-ಕುಮಟಾ ಹೆದ್ದಾರಿ ಬಂದ್

ಮುಂದಿನ 7 ತಿಂಗಳುಗಳ ಕಾಲ ಶಿರಸಿ-ಕುಮಟಾ ಹೆದ್ದಾರಿ ಬಂದ್

Fri, 20 Oct 2023 04:45:33  Office Staff   SOnews

ಶಿರಸಿ: ನ.1 ರಿಂದ ಮೇ ಕೊನೆಯ ವರೆಗೆ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ ಎಲ್ಲ ರೀತಿಯ ವಾಹನಗಳಿಗೆ ನಿರ್ಬಂಧಿಸಲಾಗುವುದು ಎಂದು ಬುಧವಾರ ಶಿರಸಿ, ಉಪವಿಭಾಗಾಧಿಕಾರಿ ದೇವರಾಜ್ ರ  ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸೇತುವೆ ಕಾಮಗಾರಿ ಹಾಗೂ ದೇವಿಮನೆ ಘಟ್ಟದಲ್ಲಿ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ  ಈ ಮಹತ್ದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ

ನಂತರ ಮಾತನಾಡಿದ ಉಪವಿಭಾಗಾಧಿಕಾರಿ ದೇವರಾಜ್, ಆರ್ ಎನ್‌ಎಸ್ ಕಂಪನಿ ಹಾಗೂ ಹೆದ್ದಾರಿ ಪ್ರಾಧಿಕಾರ ರಸ್ತೆ ಕಾಮಗಾರಿ ಗೋಸ್ಕರ ಹೆದ್ದಾರಿ ಬಂದ್ ಮಾಡುವಂತೆ ಕೋರಿದ್ದರು. ಆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶಿರಸಿ ಉಪ ವಿಭಾಗ ವ್ಯಾಪ್ತಿಗೆ ಬರುವ ಶಿರಸಿ ಕುಮಟಾ ಹೆದ್ದಾರಿಯಲ್ಲಿ 33 ಕಿ.ಮಿ.ನಲ್ಲಿ 27ಕಿ.ಮಿ ರಸ್ತೆ ಕಾಮಗಾರಿ ಮುಗಿದಿದೆ. ಆದರೆ ಸಣ್ಣ ಹಾಗೂ ದೊಡ್ಡ ಸೇತುವೆಗಳು ಸೇರಿ ಒಟ್ಟು 9 ಸೇತುವೆಗಳ ಕಾಮಗಾರಿ ನಡೆಯಬೇಕಿದೆ. ಜೊತೆಗೆ ದೇವಿಮನೆ ಘಾಟ್‌ನಲ್ಲಿ ಕಾಮಗಾರಿ ನಡೆಯಬೇಕಿದೆ. ಸೇತುವೆ ಕಾಮಗಾರಿ ನಡೆಯುವ ಸಮಯದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಕಷ್ಟಸಾಧ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಬಂದ್ ಆಗಲಿರುವ ಶಿರಸಿ ಕುಮಟಾ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಈ ಬಗ್ಗೆ ಮಾಹಿತಿ ಇರುವ ಬೋರ್ಡ್ ಗಳನ್ನು ಹಾಕಿ ಜನರಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.


Share: