ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳಿಂದ ಸಂವಾದ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳಿಂದ ಸಂವಾದ

Thu, 02 Jun 2022 04:40:52  Office Staff   SO News

ಮೂಡುಬಿದಿರೆ: ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಫಲಾನುಭವಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ  ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಾದ ಹಮ್ಮಿಕೊಂಡಿದ್ದರು. 

ಇದೇ ಸಂದರ್ಭದಲ್ಲಿ ಅವರು ಮಂಗಳೂರು ತಾಲೂಕಿನ ಉರ್ವದಲ್ಲಿ ನಿರ್ಮಿಸಲಾಗಿರುವ 33/11ಕೆವಿ ಗ್ಯಾಸ್ ಇನ್ಸುಲೇಟೆಡ್ ಉಪಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್ , ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಉಮನಾಥ್ ಎ ಕೋಟ್ಯಾನ್, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಢಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಸಾವಿರಾರು ವಿದ್ಯಾರ್ಥಿಗಳು ನೇರ ಸಂವಾದದಲ್ಲಿ ಭಾಗವಹಿಸಿದ್ದರು.


Share: