ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮುರುಡೇಶ್ವರದಲ್ಲಿ ಅಂತರಾಷ್ಟ್ರೀಯ ಕಡಲತೀರ ಸಚ್ಛತಾ ದಿನಾಚರಣೆ

ಮುರುಡೇಶ್ವರದಲ್ಲಿ ಅಂತರಾಷ್ಟ್ರೀಯ ಕಡಲತೀರ ಸಚ್ಛತಾ ದಿನಾಚರಣೆ

Sun, 18 Sep 2022 23:50:24  Office Staff   S.O. News Service

ಭಟ್ಕಳ : ಮಾನವರ ಸ್ವಯಂಕೃತ ಅಪರಾಧದಿಂದ ಇಂದು ಸಮುದ್ರ ಕಲುಷಿತಗೊಳ್ಳುತ್ತಿದೆ. ನಮ್ಮ ಅಪರಾಧದಿಂದ ಇಂದು ಜೀವಜಲಚರಗಳು ನಾಶವಾಗುವುದಲ್ಲದೇ, ಅದನ್ನು ತಿನ್ನುವ ನಮ್ಮ ಆರೋಗ್ಯದ ಮೇಲು ಪರಿಣಾಮ ಬೀರುತ್ತಿದೆ ಎಂದು ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.
ಅವರು ಶನಿವಾರ ಮುರುಡೇಶ್ವರ ಕಡಲತೀರದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಕಡಲ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಡಲ ತೀರದಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಮೊದಲು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಡಲಿಗೆ ಪ್ಲಾಸ್ಟಿಕ್ ತ್ಯಾಜ್ಯ ಎಸೆಯದಂತೆ ಪ್ರವಾಸಿಗರಿಗೆ ಜಾಗೃತಿ ಮೂಡಿಸಬೇಕು. ಈ ಸ್ವಚ್ಛತೆ ಕಾರ್ಯಕ್ರಮ ಆಚರಣೆಗಷ್ಟೇ ಸೀಮಿತವಾಗದೆ ನಿರಂತರ ನಡೆಯಬೇಕು ಎಂದರು. ಉಪವಿಭಾಗಾಧಿಕಾರಿ ಮಮತಾ ದೇವಿ ಮಾತನಾಡಿದರು.
ತಹಶೀಲ್ದಾರ ಬಿ.ಸುಮಂತ, ಕಾರವಾರ ಕೋಸ್ಟ್ ಗಾರ್ಡ್ ಕಮಾಂಡೆಂಟ್ ಹೆಚ್.ಟಿ.ಮಂಜುನಾಥ,
ವಿಜ್ಞಾನಿ ಡಾ:ರಶೀದ್, ತಾ.ಪಂ.ಇ.ಒ.ಪ್ರಭಾಕರ್ ಚಿಕ್ಕನಮನೆ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಸುರೇಶ, ಜಾಲಿ ಪ.ಪಂ ಮುಖ್ಯಾಧಿಕಾರಿ ರಾಮಚಂದ್ರ ವರ್ಣೇಕರ ಇದ್ದರು.
ನಂತರ ನಡೆದ ಕಡಲತೀರ ಸ್ವಚ್ಛತಾ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸರ್ಕಾರಿ ಇಲಾಖೆ ಸಿಬ್ಬಂದಿ, ಜೆ.ಸಿ.ಐ, ಲಯನ್ಸ ಕ್ಲಬ್ ಸೇರಿದಂತೆ ಗ್ರಾಮ ಪಂಚಾಯ್ತಿ ಸಿಬ್ಬಂದಿ, ಸದಸ್ಯರು, ಸ್ಥಳೀಯ ಸಂಘಸಂಸ್ಥೆ ಪದಾಧಿಕಾರಿಗಳು, ಎನ್.ಎಸ್.ಎಸ್., ಎನ್.ಸಿ.ಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮುರುಡೇಶ್ವರ ಎರಡು ಬದಿಯ ಕಡಲ ತೀರವನ್ನು ಸ್ವಚ್ಛಗೊಳಿಸಿ ಸಂಗ್ರಹಿಸಿದ ತ್ಯಾಜ್ಯ ವಿಲೇವಾರಿ ಮಾಡಿದರು.


Share: