ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Thu, 15 Sep 2022 04:02:28  Office Staff   SO News

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 18 ರಿಂದ 21 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿದೆ.

    ಸ್ಪರ್ಧೆ ನಡೆಯುವ ದಿನಾಂಕ, ಸ್ಥಳದ ವಿವರ: ಸೆಪ್ಟಂಬರ್ 18 ಮತ್ತು 19 ರಂದು ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್, ಈಜು, ಟೆನ್ನಿಸ್, ಬಾಕ್ಸಿಂಗ್ ಮತ್ತು ವುಷು ಸ್ಪರ್ಧೆಗಳು ಹಾಗೂ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೆಟ್ಬಾಲ್, ಕುಸ್ತಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ನೆಟ್ಬಾಲ್, ವೈಟ್ಲಿಫ್ಟಿಂಗ್ ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು, ಸೆ.20 ರಂದು ಕೊಡಗು ಕೂಡಿಗೆಯ ಕ್ರೀಡಾಶಾಲೆಯಲ್ಲಿ ಹಾಕಿ ಮತ್ತು ಜಿಮ್ನಾಸ್ಟಿಕ್ ಸ್ಪರ್ಧೆಗಳು ಹಾಗೂ ಸೆ. 20 ಮತ್ತು 21 ರಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ತ್ರೋಬಾಲ್, ಖೋ-ಖೋ, ಕಬ್ಬಡಿ, ಬ್ಯಾಡ್ಮಿಂಟನ್, ಜೂಡೋ ಮತ್ತು ಟೇಕ್ವಾಂಡೋ ಸ್ಪರ್ಧೆಗಳು ನಡೆಯಲಿವೆ.

     ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ.

     ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 


Share: