ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮೋಪಾ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತ ಉದ್ಘಾಟನೆ

ಮೋಪಾ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತ ಉದ್ಘಾಟನೆ

Tue, 13 Dec 2022 09:15:44  Office Staff   Vb

ಪಣಜಿ(ಗೋವಾ): ಪ್ರಧಾನಿ ನರೇಂದ್ರ ಮೋದಿ ಅವರು ಗೋವಾದಲ್ಲಿ ಮೋಪಾ ಗ್ರೀನ್‌ಪೀಲ್ಡ್ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತ ಹಾಗೂ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಸಂಸ್ಥೆಯನ್ನು ರವಿವಾರ ಉದ್ಘಾಟಿಸಿದರು.

ಮೋಪಾ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಈ ನೂತನ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ ಪಾರಿಕ್ಟ‌ ಅವರ ನೆನಪಿಗಾಗಿ 'ಮನೋಹರ್ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲಾಗುವುದು ಎಂದು ಅವರು ತಿಳಿಸಿದರು.

ಪ್ರಧಾನಿ ಅವರು ಗೋವಾದ ಧರ್ಗಾಲ್‌ನಲ್ಲಿ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಆಯುರ್ವೇದವನ್ನು ಕೂಡ ಉದ್ಘಾಟಿಸಿದರು. ಅಲ್ಲದೆ, ಅವರು ಗೋವಾದಿಂದಲೇ ಗಾಝಿಯಾಬಾದ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ಹಾಗೂ ಹೊಸದಿಲ್ಲಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೋಮಿಯೋಪತಿಯನ್ನು ಕೂಡ ಆನ್‌ಲೈನ್ ಮೂಲಕ ಉದ್ಘಾಟಿಸಿದರು.


Share: