ಚಿಕ್ಕಬಳ್ಳಾಪುರ: ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ಕಷ್ಟಗಳನ್ನು ನಿವಾರಣೆ ಮಾಡಲು ಜನಸ್ವಂದನ ಕಾರ್ಯಕ್ರಮಗಳಿಗೆ ಬಂದಾಗ ಸಾರ್ವಜನಿಕರು ಅಧಿಕಾರಿಗಳೊಂದಿಗೆ ದೌರ್ಜನ್ಯದ ಮನೋಭಾವಬಿಟ್ಟು ಸೌಜನ್ಯದಿಂದ ವರ್ತಿಸುವ ಮೂಲಕ ಕುಂದುಕೊರತೆಗಳನ್ನು ನಿವಾರಣೆ ಮಾಡಿಕೊಳ್ಳೆಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ತಿಳಿಸಿದರು.
ಅವರು ಇಂದು ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನಸ್ವಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚು ಮಾಡುತ್ತಿದ್ದು ಇದರ ಸೌಲಭ್ಯಗಳು ಕಡುಬಡವರಿಗೆ ಸರಿಯಾಗಿ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕೆಂದರು.
ಹಿಂದಿನ ವರ್ಷಗಳಲ್ಲಿ ಶ್ಯಾನುಬೋಗರು ಗ್ರಾಮಗಳಲ್ಲಿನ ಜಾನುವಾರುಗಳಿಂದ ಇಡಿದು ಎಲ್ಲಾ ಮಾಹಿತಿಯನ್ನು ಸರಿಯಾಗಿ ನೀಡುತ್ತಿದ್ದರಲ್ಲದೆ ಜಮಾಬಂಧಿಗಳನ್ನು ನಡಸಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿದ್ದರು. ಈಗ ಗ್ರಾಮಮಟ್ಟದಲ್ಲಿ ಅಧಿಕಾರಿಗಳು ವಾಸವಿಲ್ಲದೆ ಮಾಹಿತಿಯು ಸಹಾ ಲಭ್ಯವಿಲ್ಲದೆ ಇರುವುದರಿಂದ ಪರಿಸ್ಧಿತಿಯನ್ನು ಅರಿತು ಮಾನ್ಯ ಮುಖ್ಯಮಂತ್ರಿಗಳು ಇತಿಹಾಸದಲ್ಲಿ ಬರೆದಿಡುವಂತಹ ಜನಸ್ವಂದನ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನರ ಕುಂದುಕೊರತೆಗಳನ್ನು ಅಧಿಕಾರಿಗಳ ಮನೆ ಬಾಗಿಲಿಗೆ ಹೋಗಿ ಪರಿಹಾರ ಮಾಡಬೇಕೆಂದು ಆದೇಶಿಸಿದ್ದಾರೆ ಎಂದರು.
ಜನಸ್ವಂದನ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯತಿದ್ದು ಸಾವಿರಾರು ಜನರಿಗೆ ಮಾಶಾಸನಗಳನ್ನು ಮಂಜೂರು ಮಾಡಲಾಗಿದೆ ಹಾಗೂ ಹಲವಾರು ಸಮಸ್ಯೆಗಳನ್ನು ನಿವಾರಣೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಲ್ವಸಂಖ್ಯಾತರ ಕಲ್ಯಾಣಕ್ಕಾಗಿ ೧೭೬ ಕೋಟಿ ರೊಗಳನ್ನು ವೆಚ್ಚಮಾಡಿ ಅಲ್ವಸಂಖ್ಯಾತರ ಮಕ್ಕಳಿಗೆ ಶಿಕ್ಷಣಕ್ಕಾಗಿ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಅಲ್ವಸಂಖ್ಯಾತರ ಎರಡು ಮುರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಮಂಜೂರು ಮಾಡಿದ್ದು ಒಟ್ಟು ಹತ್ತು ಕೋಟಿ ರೊಗಳನ್ನು ವೆಚ್ಚ ಮಾಡಿ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಸ್ತೆಗಳು ಹದಗೆಟ್ಟಿರುವುದು ಗಮನಕ್ಕೆ ಬಂದಿದೆ ಈ ರಸ್ತೆಗಳ ಅಭಿವೃದ್ದಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ಹೇಳಿದರು.ಶಾಸಕ ಎನ್.ಸಂಪಂಗಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ಪಕ್ಷಬೇದ ಮರೆತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಈಗ ಜನಸ್ಪಂದನಗಳ ಮೂಲಕ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಮಾಡಲಾಗುತ್ತದೆ ಎಂದು ಹೇಳಿದರು.
ಬಾಗೇಪಲ್ಲಿ ತಾಲ್ಲೂಕಿನಲ್ಲಿ ರಸ್ತೆಗಳು ಹಾಳಾಗಿವೆ ಕಳಪೆ ಕಾಮಾಗಾರಿ ಮಾಡಿ ರಸ್ತೆಗಳನ್ನು ನಿರ್ಮಿಸಿರುವ ಗುತ್ತಿಗೆದಾರರು ಹಾಗೂ ಇಂಜಿನೀಯರ್ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಈಗ ಚೇಳೂರಿನಿಂದ ಬಾಗೇಪಲ್ಲಿಯವರೆಗೆ ರಸ್ತೆ ನಿರ್ಮಾಣಕ್ಕೆ ೨.೫ ಕೋಟಿ ಮಂಜೂರಾಗಿದೆ ಇದರಲ್ಲಿ ಉತ್ತಮ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದರು. ಬಾಗೇಪಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆಗಳನ್ನು ನಿರ್ಮಿಸಲಾಗುತ್ತದೆ, ಕುಡಿಯುವ ನೀರಿನಲ್ಲಿ ಪ್ಲೋರೈಡ್ ಇರುವುದರಿಂದ ಶುದ್ದ ಕುಡಿಯುವ ನೀರು ಪೂರೈಕೆಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಕೆರೆಯನ್ನು ಹೂಳು ತೆಗೆದು ಅಭಿವೃದ್ಧಿ ಪಡಿಸಿ ಕೆರೆ ನೀರನ್ನು ಗ್ರಾಮಗಳಿಗೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವ್ಯದೆಂದರು.
ಈಗ ಪರಗೋಡ್ ಅಣೆಕಟ್ಟಿನಿಂದ ೧೨೦ ಗ್ರಾಮಗಳು ಹಾಗೂ ವಂಡಮಾನ್ ಅಣೆಕಟ್ಟಿನಿಂದ ೬೨ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದೆಂದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಚೆಂಡೂರು ವೆಂಕಟೇಶ್ ಮಾಡನಾಡಿ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ನೇರವಾಗಿ ಜನರನ್ನು ಸಂಪರ್ಕಿಸುವ ಮೂಲಕ ಮದ್ಯ ವರ್ತಿಗಳ ಆವಳಿಯನ್ನು ತಡೆದಿದ್ದಾರೆಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಅನ್ವರ್ ಪಾಷ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ರವೀಂದ್ರ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಕೃಷ್ಣಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಅಶ್ವಥಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷಣಿ ಶ್ರೀಮತಿ ಚೆನ್ನಮ್ಮ, ಉಪಸ್ಥಿತರಿದ್ದರು.
ತಹಶೀಲ್ದಾರ್ ಹನುಮಂತಪ್ಪ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಬಿ.ಶ್ರೀನಿವಾಸ್ ವಂದಿಸಿದರು. ಜನಸ್ಪಂದನ ಸಭೆಯಲ್ಲಿ ವೃದ್ದಾಪ್ಯ ವೇತನ, ಭ್ಯಾಲಕ್ಷ್ಮಿ ಬಾಂಡ್ಗಳನ್ನು ವಿತರಿಸಲಾಯಿತು. ಸಾರ್ವಜನಿಕರಿಂದ ೬೦ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಫೋಟೋ ವಿವರ
೧. ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನಸ್ವಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ಉದ್ಘಾಟಿಸುತ್ತಿರುವುದು. ಶಾಸಕ ಎನ್.ಸಂಪಂಗಿ, ಜಿಲ್ಲಾಧಿಕಾರಿ ಅನ್ವರ್ ಪಾಷ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ರವೀಂದ್ರ ಪ್ರಸಾದ್, ಜಿ.ಪಂ ಉಪಾಧ್ಯಕ್ಷ ಚೆಂಡೂರು ವೆಂಕಟೇಶ್ ಚಿತ್ರದಲ್ಲಿದ್ದಾರೆ.

೨. ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನಸ್ವಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ಭ್ಯಾಲಕ್ಷ್ಮಿ ಬಾಚಿಡ್ಗಳನ್ನು ವಿತರಿಸುತ್ತಿರುವುದು.