ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಯುವನಿಧಿ : ಜ.8-9ರಂದು ನೋಂದಣಿ ಮೇಳ

ಯುವನಿಧಿ : ಜ.8-9ರಂದು ನೋಂದಣಿ ಮೇಳ

Mon, 08 Jan 2024 05:20:36  Office Staff   SO News

ಮಂಗಳೂರು:  ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.

ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 8ಮತ್ತು 9 ರಂದು ನೋಂದಣಿ ಮೇಳವನ್ನು ನಡೆಸಲು ಅವರು ತಿಳಿಸಿದರು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೆ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿಯೇ ನೋಂದಣಿ ಅಭಿಯಾನ ನಡೆಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಎ.ಎಂ. ಖಾನ್, ಮತ್ತಿತರರು ಉಪಸ್ಥಿತರಿದ್ದರು.


Share: