ಭಟ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇವರ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ಧಾರ್ಮಿಕ ಪಠಣ (ಅರೇಬಿಕ್) ಸ್ಪರ್ಧೆಯಲ್ಲಿ ಭಟ್ಕಳ ಅಂಜುಮನ್ ಹೆಣ್ಣುಮಕ್ಕಳ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಫಾತೀಮಾ ರೋಹ್ರಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈಕೆಯ ಈ ಸಾಧನೆಗೆ ಭಟ್ಕಳ ಅಂಜುಮನ್ ಹೆಣ್ಣುಮಕ್ಕಳ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶಬಾ ದಾಮ್ಯಾ, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.