ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಪೂರ್ವಸಿದ್ಧತೆ ಕುರಿತು ವಿಡಿಯೋ ಕಾನ್ಫರೆನ್ಸ್

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಪೂರ್ವಸಿದ್ಧತೆ ಕುರಿತು ವಿಡಿಯೋ ಕಾನ್ಫರೆನ್ಸ್

Wed, 15 Mar 2023 04:29:15  Office Staff   SOnews

ಕಾರವಾರ: ಮಾದರಿ ನೀತಿ ಸಂಹಿತೆ ಜಾರಿ ಆಗುವ ಪೂರ್ವದಲ್ಲಿಯೇ ಅಗತ್ಯ ಚುನಾವಣೆ ತಯಾರಿ ಮಾಡಿಕೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಬಾ ಆ ಸೇ ಹೇಳಿದರು.

ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಪೂರ್ವಸಿದ್ಧತೆ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ದೋಷ ಮುಕ್ತ ಚುನಾವಣೆಗೆ ಅಗತ್ಯ ಪೂರ್ವ ತರಬೇತಿಯನ್ನು ಸಿಬ್ಬಂದಿಗಳಿಗೆ ನೀಡುವಂತೆ ಸೂಚಿಸಿದರು. ಪ್ರಚೋದನೆ ಮುಕ್ತ ಚುನಾವಣೆ ನಡೆಸಲಾಗುವುದು ಒಂದು ವೇಳೆ ಅಂತಹ ಪ್ರಚೋದನೆಗಳು ಕಂಡು ಬಂದಲ್ಲಿ ಅವುಗಳ ಮೇಲೆ ಕೂಡಲೇ ಕ್ರಮ ವಹಿಸಲು ಸೂಚಿಸಿದರು.

ಹಾಗೆಯೇ ಚುನಾವಣೆಗೆ ಸಂಬಂಧಿಸಿದ ದೂರುಗಳು ಮತ್ತು ಮಾಧ್ಯಮಗಳಾದ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.

ಹಾಗೆಯೇ EVM ಮತ್ತು VVPAT ಗಳ ಜಾಗೃತಿ ಕಾರ್ಯಕ್ರಮಗಳನ್ನು ಹಾಕಿಕೊಂಡು ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸುವಂತೆ ಸೂಚಿಸಿದರು ಹಾಗೂ ಕ್ಷೇತ್ರವಾರು ಖಾಲಿ ಇರುವ ಚುನಾವಣೆ ಅಧಿಕಾರಿ ಮತ್ತು ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು. 80 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.

ಆಯಾ ಜಿಲ್ಲೆಯ ಗಡಿ ಭಾಗಗಳನ್ನು ಗುರುತಿಸಿ ಅಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಿ ಬಿಗಿ ಭದ್ರತೆಯನ್ನು ಮಾಡುವಂತೆ ಹಾಗೂ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸುವಂತೆ ಸೂಚಿಸಿದರು.

ವಿಡಿಯೋಕಾನ್ ಫ್ರೆಂಡ್ಸ್ ಸಭೆಯಲ್ಲಿ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸುಪ್ರೀಡೆಂಟ್ ಆಫ್ ಪೊಲೀಸ್ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು


Share: