ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿವಿಧ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ವಿವಿಧ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

Sat, 03 Sep 2022 14:16:44  Office Staff   SO News

ಉಡುಪಿ : ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: