ಬಂಟ್ವಾಳ: ತಾಲುಕಿನ ಸಿದ್ದಕಟ್ಟೆ ನಾರಾಯಣ ಗಿರಿಯಲ್ಲಿ 70ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನವನ್ನು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಸೋಮವಾರ ಉದ್ಘಾಟಿಸಿದರು. ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು.
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ, ಚಿತ್ರನಟ ಕೆ.ಪಿ.ನಂಜುಂಡಿ,ಶಾಸಕರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಯು.ಟಿ.ಖಾದರ್, ಜಿಲ್ಲಾ ಪಂಚಾಯತ್ ಸದಸ್ಯ ಎ.ಸಿ.ಭಂಡಾರಿ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸಾಯಿರಾಮ್, ಬಿಲ್ಲವ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಬೆಂಗಳೂರು ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ವೇದ ಕುಮಾರ್, ತಾಲೂಕು ಪಂಚಾಯತ್ ಸದಸ್ಯ ರತ್ನಕುಮಾರ್ ಚೌಟ, ಬಿಲ್ಲವರ ಮಹಾಮಂಡಲ ವಕ್ತಾರ, ಸ್ವಾಗತ ಸಮಿತಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ . ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ಧನ ಬಂಗೇರ ವಂದಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಬಂಗೇರ, ಕಟ್ಟಡ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಯುವ ಸಮಿತಿ ಅಧ್ಯಕ್ಷ ಹರೀಶ್ ಹಿಂಗಾಣಿ, ಮಹಿಳಾ ಸಮಿತಿ ಅಧ್ಯಕ್ಷೆ ಗಿರಿಜಾ ಅಂಚನ್ ಉಪಸ್ಥಿತರಿದ್ದರು ಕಲಾವಿದ ಎಚ್ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು.