ಭಟ್ಕಳ: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಶಿರಾಲಿಯ ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100 ರಷ್ಟು ಫಲಿತಾಂಶ ದಾಖಲಾಗಿದೆ.
ಕುಮಾರಿ ದಿಶಾ ಮೂಲಿಮನೆ 625 ಅಂಕಗಳಿಗೆ 616 ಅಂಕ (98.56%) ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಕುಮಾರ ಸಂದೇಶ ಸತೀಶ ಆಚಾರ್ಯ 625 ಕ್ಕೆ 591 (94.56%) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಕುಮಾರ ಹೆಮಂತ ಮಂಜುನಾಥ ನಾಯ್ಕ 625 ಕ್ಕೆ 583 (93.28%) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾನೆ.
16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ ಹಾಗೂ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕನ್ನಡ ವಿಷಯದಲ್ಲಿ 4 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 4 ವಿದ್ಯಾರ್ಥಿಗಳು, ಹಿಂದಿ ವಿಷಯದಲ್ಲಿ 12 ವಿದ್ಯಾರ್ಥಿಗಳು ಹಾಗೂ ಇಂಗ್ಲೀಷ್ ವಿಷಯದಲ್ಲಿ 1 ವಿದ್ಯಾರ್ಥಿ 100 ಕ್ಕೆ 100 ಅಂಕ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.