ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸರಕಾರಕೆ ಮಾನ-ಮರ್ಯಾದೆ ಇದ್ದರೆ ಚಕ್ರತೀರ್ಥರನ್ನು ಕಿತ್ತು ಹಾಕಬೇಕು

ಸರಕಾರಕೆ ಮಾನ-ಮರ್ಯಾದೆ ಇದ್ದರೆ ಚಕ್ರತೀರ್ಥರನ್ನು ಕಿತ್ತು ಹಾಕಬೇಕು

Thu, 26 May 2022 07:25:51  Office Staff   Vb

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರಕ್ಕೆ ಮಾನ ಮರ್ಯಾದೆ ಏನಾದರೂ ಇದ್ದರೆ ಮೊದಲು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ನೇಮಕ ಮಾಡಿರುವ ರೋಹಿತ್ ಚಕ್ರತೀರ್ಥರನ್ನು ಕೂಡಲೇ ಸಮಿತಿಯಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸೋಮವಾರ ಟ್ವಿಟ್ ಮಾಡಿರುವ ಅವರು, 'ನಾಡಗಿ ತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಸರಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು' ಎಂದು ಒತ್ತಾಯ ಮಾಡಿದ್ದಾರೆ.


Share: