ಯಲ್ಲಾಪುರ : ತಾಲೂಕಿನ ಸಾತೊಡ್ಡಿ ಜಲಪಾತದ ವ್ಯಕ್ತಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹುಬ್ಬಳ್ಳಿಯ ಪೋತುಲ್ ರಾಮನೇಂದ್ರ ರಾವ್ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ರವಿವಾರ ತಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಜಲಪಾತಕ್ಕೆ ನೋಡಲು ಬಂದಿದ್ದರು. ಈ ವೇಳೆ ತಮ್ಮ ಮಗನೊಂದಿಗೆ ಜಲಪಾತದ ನೀರಲ್ಲಿ ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಸೋಮವಾರ ಮೃತದೇಹ ಪತ್ತೆಯಾಗಿದೆ. ಮೃತ ಪೋತುಲ್ ರಾವ್ ಹುಬ್ಬಳ್ಳಿಯಲ್ಲಿ ರೈಲ್ವೇ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.