ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.29ರಂದು ಸುರತ್ಕಲ್, ಬಜ್ಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.29ರಂದು (ಇಂದು) ಬೆಳಗ್ಗೆ 10ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ನಿಷೇಧಿಸಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
ವಾಹನ ತಪಾಸಣೆಗಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿದ್ದೇವೆ
ರಾತ್ರಿ 10 ಗಂಟೆಯ ನಂತರ ಎಲ್ಲ ವಾಹನಗಳು ಹಾಗೂ ಸಂಚರಿಸುವ ಪ್ರತಿಯೊಬ್ಬರ ಚಲನವಲನವನ್ನು ಪರಿಶೀಲಿಸುತ್ತೇವೆ. ಶಂಕಿತ ವ್ಯಕ್ತಿಗಳನ್ನು ಪರಿಶೀಲನೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗುವುದು. ಫಾಜಿಲ್ ಹತ್ಯೆಯಿಂದ ಜನರಲ್ಲಿ ಭಯ ಹುಟ್ಟಿಸಿದೆ. ಸದ್ಯಕ್ಕೆ ಫಾಜಿಲ್ ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ದೂರು ಸ್ವೀಕರಿಸಿದ್ದೇವೆ. ಪ್ರಕರಣದ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗುವುದು
ಮಂಗಳೂರು ಶಿಕ್ಷಣ ಕೇಂದ್ರವಾಗಿದೆ. ಅನೇಕರು ತಮ್ಮ ಶಿಕ್ಷಣ ಮತ್ತು ಕೆಲಸ ಮಾಡಲು ಇಲ್ಲಿಗೆ ಬರುತ್ತಾರೆ. ನಾವು ಸೆಕ್ಷನ್ 144 ವಿಧಿಸಿದಾಗ, ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಮತ್ತು ಕೆಲಸಕ್ಕೆ ಹೋಗುವವರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಫಾಜಿಲ್ ಹತ್ಯೆ ಪ್ರಕರಣವನ್ನು ಭೇದಿಸುವ ಕೆಲಸ ಮಾಡುತ್ತಿದ್ದೇವೆ. ಮಂಗಳೂರಿನ ಜನತೆ ಶಾಂತಿ ಕಾಪಾಡುವಂತೆ ಹಾಗೂ ಪೊಲೀಸರೊಂದಿಗೆ ಸಹಕರಿಸುವಂತೆ ಕೋರುತ್ತೇನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ವೀಡಿಯೋ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.