ಮಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಮಂಗಳೂರು ಉತ್ತರ ಶಾಸಕ ವೇದವ್ಯಾಸ ಕಾಮತ್, ಸುರತ್ಕಲ್ ಕ್ಷೇತ್ರದ ಶಾಸಕ ಡಾಕ್ಟರ್ ವೈ ಭರತ್ ಶೆಟ್ಟಿ, ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಕಾರ್ಕಳದ ಶಾಸಕ ವಿ ಸುನಿಲಕುಮಾರ್, ಸುಳ್ಯ ಶಾಸಕಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮುಂತಾದವರು ಉಪಸ್ಥಿತರಿದ್ದರು