ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Sun, 11 Jun 2023 18:45:37  Office Staff   ANI

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು. ಸಮಾರಂಭದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಿದರು. ​​

FyUoxijakAIIGuG.jpg


ಇದೇ ವೇಳೆ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್​​​​ ಕಾರ್ಡ್​​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬಿಡುಗಡೆ ಮಾಡಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್​, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್​ಸಿ ಹರಿಪ್ರಸಾದ್​​, ಸಿಎಸ್​​ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್​.ವಿ.ಪ್ರಸಾದ್​, ಕೆಸ ಎಂಡಿ ಅನ್ಬುಕುಮಾರ್,​ ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.
ಕಾರ್ಯಕ್ರಮದಲ್ಲಿ ಎರಡು ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.ಬಳಿಕ ಅದೇ ಬಸ್ ಗಳಲ್ಲಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಟರ್ಮಿನಲ್ 2 ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಅಲ್ಲಿ ಶೂನ್ಯದರದ ಟಿಕೆಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ.


Share: