ಹಳಿಯಾಳ: ಯುವಕನೊರ್ವ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ತಾಲೂಕಿನ ಸಾತ್ಮನಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ ಮೋರೆ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಾತ್ಮನಿ ಗ್ರಾಮದ ಸಮೀಪವಿರುವ ಕೆರೆಯಲ್ಲಿ ಕಾಲುಜಾರಿ ಬಿದ್ದಿದ್ದಾನೆ.
ಸ್ಥಳಕ್ಕೆ ಹಳಿಯಾಳ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಪ್ರಯೋಜನವಾಗಿಲ್ಲ.
ಸೋಮವಾರ ಸಂಜೆ ವೇಳೆ ಶವ ಪತ್ತೆಯಾಗಿದೆ. ಹಳಿಯಾಳ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.