ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಿಂಬದಿ ಸವಾರನ ಸಾವಿಗೆ ದ್ವಿಚಕ್ರ ವಾಹನ ಮಾಲಕ ಪರಿಹಾರ ಪಾವತಿಸ ಬೇಕು ಹೈ ಕೋರ್ಟ್ ಆದೇಶ

ಹಿಂಬದಿ ಸವಾರನ ಸಾವಿಗೆ ದ್ವಿಚಕ್ರ ವಾಹನ ಮಾಲಕ ಪರಿಹಾರ ಪಾವತಿಸ ಬೇಕು ಹೈ ಕೋರ್ಟ್ ಆದೇಶ

Wed, 27 Dec 2023 21:58:10  Office Staff   Vb

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ.

ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿ ಕರಣ ಇನ್ನೂರೆನ್ಸ್ ಕಂಪೆನಿಗೆ ಪರಿಹಾರ ಪಾವತಿಸಲು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ನ್ಯಾಯಮಂಡಳಿ ನಿಗದಿಪಡಿಸಿದ ಪರಿ ಹಾರ ಮೊತ್ತವನ್ನು ಮೃತನ ಕುಟುಂಬ ಸ್ಥರಿಗೆ ನೀಡುವಂತೆ ವಾಹನದ(ಹೀರೋ ಹೋಂಡಾ ಬೈಕ್) ಮಾಲಕ ನಿಝಾಮುದ್ದೀನ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.

ಪ್ರಕರಣವೇನು?: 2011ರ ಮಾ.24 ರಂದು ಮೃತ ಸಿದ್ದೀಕ್ ಉಲ್ಲಾಖಾನ್ ಎಂಬವರು ಕುಣಿಗಲ್ ಬಳಿ ನಿಝಾಮು ದ್ದೀನ್‌ ಅವರ ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡುತ್ತಿದ್ದರು.

ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೀರೋ ಹೋಂಡಾ ಬೈಕ್ ಹಳ್ಳಕ್ಕೆ ಬಿದ್ದಿತ್ತು. ಈ ವೇಳೆ ತೀವ್ರವಾಗಿ ಗಾಯಗೊಂಡ ಖಾನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾರ್ಚ್ 26, 2011 ರಂದು ಖಾನ್ ಮೃತಪಟ್ಟಿದ್ದರು.

ನಂತರ ಖಾನ್ ಕುಟುಂಬ ಸದಸ್ಯರುಪರಿ ಹಾರ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೆ, ಖಾನ್ ಚಿಕಿತ್ಸೆ ಮತ್ತು ಇತರ ವೆಚ್ಚಗಳಿಗಾಗಿ 1.2 ಲಕ್ಷ ರೂ. ಖರ್ಚು ಮಾಡಿದ್ದು, ಒಟ್ಟು 15 ಲಕ್ಷ ರೂ. ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕುಣಿಗಲ್‌ನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ 2017ರ ಆ.24ರಂದು, ವಾರ್ಷಿಕ ಶೇ.6 ಬಡ್ಡಿಯೊಂದಿಗೆ 7,27,114 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು.

ಹೈಕೋರ್ಟ್ ತೀರ್ಪು: ವಾಹನದ ಆಸನದ ಸಾಮರ್ಥ್ಯವು 1+1 ಆಗಿದ್ದು, ಅದರ ಆಧಾರದ ಮೇಲೆ ನ್ಯಾಯ ಮಂಡಳಿಯು ವಿಮಾ ಕಂಪೆನಿಯ ಮೇಲೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ನಿಗದಿಪಡಿಸಿದೆ, ನ್ಯಾಯಾಧಿಕರಣದ ಆದೇಶ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ಪರಿಹಾರ ಪಾವತಿಸುವ ಹೊಣೆಯನ್ನು ಬೈಕ್ ಮಾಲಕನಿಗೆ ವರ್ಗಾಯಿಸಿದೆ.


Share: