ರಾಮನಗರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಮನಗರದ ಕ್ಷೇತ್ರಹಳ್ಳಿ ಕೆರೆಗಳು ಒಡೆದು ಹುಣಸನಹಳ್ಳಿ ರಸ್ತೆಯಲ್ಲಿನ ತೀವ್ರವಾಗಿ ಹಾನಿಗೊಳಗಾಗಿರುವ ನೂರಾರು ಮನೆಗಳ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಕೂಡಲೇ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರು ನುಗ್ಗಿ ರೇಷ್ಮೆ ನೂಲು ತೆಗೆಯುವ ಘಟಕಗಳಿಗೆ ಹಾನಿಯಾಗಿದ್ದು, ಅಲ್ಲಿಗೂ ಭೇಟಿ ನೀಡಿದ ಮುಖ್ಯಮಂತ್ರಿಗಳು ಹಾನಿಯಾಗಿರುವ ಯಂತ್ರಗಳನ್ನು ಪರಿಶೀಲಿದರು.
ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್, ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್, ಸಂಸದ ಡಿ.ಕೆ.ಸುರೇಶ್ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು